ಇತ್ತೀಚೆಗೆ ಅತ್ಯಾಚಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ ದಿನವೂ ಇವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಹಲವರಂತೂ ಕುಡಿದ ಅಮಲಿನಲ್ಲಿ ಏನು ಮಾಡುತ್ತಾರೆ ಎಂಬುವುದೇ ಗೊತ್ತಾಗುವುದಿಲ್ಲ. ಕೆಲವು ಕಾಮುಕರಂತೂ ಪ್ರಾಣಿಗಳನ್ನೂ ಬಿಡುತ್ತಿಲ್ಲ. ಹೀಗೆ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹಸುವಿನ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿ, ಸಿಕ್ಕಿಬಿದ್ದಿದ್ದಾನೆ.
ಕೋಪಗೊಂಡ ಹಸು, ಕಾಮುಕನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಡಿದ ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.
ಈ ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರವಾಸಕ್ಕೆ ಬಂದಿದ್ದ ರಷ್ಯಾದ 26 ವರ್ಷದ ಕುವ್ಶಿನೋವ್ ಎಂಬಾತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಕೋಪಗೊಂಡ ಹಸು ಈ ಕಾಮಾಂಧನ ಮೇಲೆ ಕೊಂಬಿನಿಂದ ದಾಳಿ ನಡೆಸಿದೆ. ಕೊನೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆತ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಸಲಾಗುತ್ತಿದೆ.
Beautiful Russia ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಹಸು ಭೀಕರವಾಗಿ ದಾಳಿ ನಡೆಸುವ ದೃಶ್ಯವನ್ನು ಕಾಣಬಹುದು. ಕುಡಿದ ಮತ್ತಿನಲ್ಲಿ ರಷ್ಯಾ ಪ್ರವಾಸಿಗನೊಬ್ಬ ಸಂಪೂರ್ಣ ಬೆತ್ತಲೆಯಾಗಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಆಗ ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಡಿ, ದಾಳಿ ನಡೆಸಿದೆ. ಕೊನೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ.