ದಾವಣಗೆರೆ: 300 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಸಮೀಪದ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ ಎಂಬ ರೈತನಿಗೆ ಸೇರಿದ ನಾಲ್ಕು ವರ್ಷದ ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.
ಈ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಾಗರಾಜ್, ಸಾಲ ಮಾಡಿ ಮಳೆಯಾಶ್ರಿತ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಹಾಕಿ ಕೃಷಿ ಮಾಡಲಾಗಿತ್ತು. ದುಷ್ಕರ್ಮಿಗಳು ಇದೀಗ ಆರು ಲಕ್ಷ ರೂಪಾಯಿ ನನಗೆ ನಷ್ಟವಾಗಿದೆ ಎಂದು ಅವಲತ್ತುಕೊಂಡಿದ್ದಾರೆ.
ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ.


















