ಕೊಪ್ಪಳ: ರಾಜ್ಯದ್ಯಂತ ಬಾಣಂತಿಯರ ಮರಣ ಮೃದಂಗ ಮತ್ತೆ ಮುಂದುವರೆದಿದ್ದು, ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಕುಕನೂರು ತಾಲೂಕಿನ ಆಡೂರ್ ಗ್ರಾಮದ ನಿವಾಸಿ ರೇಣುಕಾ ಪ್ರಕಾಶ್ ಹಿರೇಮನಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕುಷ್ಟಗಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಬಂದಿದ್ದ ರೇಣುಕಾಗೆ ಬೆಳಗ್ಗೆ 2:30ರ ವೇಳೆಗೆ ಹೆರಿಗೆ ಆಗಿತ್ತು. ಆದರೆ ಡೆಲಿವರಿಗೂ ಮೊದಲೇ ಮಗು ಸಾವನ್ನಪ್ಪಿದ್ದು, ಸಿಜೇರಿಯನ್ ಮಾಡಿ ವೈದ್ಯರು ಮಗುವನ್ನು ಹೊರ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಹೈಬಿಪಿ ಮತ್ತು ಹೃದಯಾಘಾತದಿಂದ ರೇಣುಕಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಪೋಷಕರು ಆಸ್ಪತ್ರೆ ಮುಂದೆ ಕಣ್ಣೀರು ಹಾಕಿದ್ದಾರೆ.