ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ.
ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಈ ಘಟನೆಯಿಂದ ಬೆಚ್ಚಿಬಿದ್ದ ಡೆಲಿವರಿ ಬಾಯ್ಸ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಏರ್ಪೋರ್ಟ್ನಲ್ಲಿ 2.97 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ – ಮೂವರು ವಶಕ್ಕೆ



















