ದಿ ಡೆವಿಲ್ ಸಿನಿಮಾ ಟ್ರೆಲರ್ ಔಟ್ ಆಗಿದೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಫ್ಯಾನ್ಸ್ ಕೊಂಡಾಡಿದ್ದಾರೆ. ಟ್ರೈಲರ್ ನೋಡಿ, ನಿರೀಕ್ಷೆ ಇನ್ನಷ್ಟು ಹೆಚ್ಚಾಯ್ತು ಅಂತ ಕಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಫ್ಯಾನ್ಸ್. ದರ್ಶನ್ ಅವರು ಟ್ರೈಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಫಿದಾ ಆಗಿದ್ದಾರೆ ಸಿನಿಪ್ರಿಯರು. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ.
`ಖೇಲ್ ಕಥಮ್, ನಾಟಕ್ ಬಂದ್’! ಎಂದು ಮಾಸ್ ಡೈಲಾಗ್ ಮೂಲಕ ಅಬ್ಬರಿಸಿದ್ದಾರೆ ಚಾಲಿಂಗ್ ಸ್ಟಾರ್. ಟ್ರೈಲರ್ ನಲ್ಲಿ ಬಿಗ್ ಬಾಸ್ ಗಿಲ್ಲಿ ನಟ, ಚಂದು ಗೌಡ, ವಿನಯ್ ಗೌಡ ಮೊದಲಾದವರನ್ನು ತೋರಿಸಲಾಗಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ.
‘ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನ ಮಾಡುವುದರಿಂದ ನಿರೀಕ್ಷೆ ಹೆಚ್ಚಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಚಿತ್ರವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.
‘ಡೆವಿಲ್’ ಸಿನಿಮಾದಲ್ಲಿ ದರ್ಶನ್ಗೆ ಜೊತೆಯಾಗಿ ಕುಡ್ಲ ಬೆಡಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ.
ಇದನ್ನೂ ಓದಿ : ಕಾಂತಾರ ಚಾಪ್ಟರ್-1 ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್ ಶೆಟ್ಟಿ



















