ಪಾಟ್ನಾ: ಪ್ರಿಯಕರ ತನಗೆ ಅನ್ಯಾಯ ಮಾಡಿದ್ದಾನೆಂದು ಆರೋಪಿಸಿರುವ ವೈದ್ಯೆಯೊಬ್ಬರು ಆತನ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆಯೊಂದು ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತು ವೈದ್ಯೆಯನ್ನು (Woman Doctor) ಬಂಧಿಸಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ ಆಕೆ ಪ್ರಿಯಕರ ತನಗೆ ಅನ್ಯಾಯ ಮಾಡಿದ್ದರಿಂದ ನಾನು ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾಳೆ. ಘಟನೆಯ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲ್ ಆಗಿದೆ.

ವೈರಲ್ ವೀಡಿಯೋದಲ್ಲಿ ವೈದ್ಯೆ, ಆತ ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ನಾನು ಮೂರು ಬಾರಿ ಗರ್ಭಪಾತಕ್ಕೆ ಒಳಗಾಗಬೇಕಾಯಿತು ಎಂದು ಹೇಳಿದ್ದಾಳೆ. ಅವನು ನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ. ಕೋಪದಲ್ಲಿ ಈ ಕೃತ್ಯ ಎಸಗಿದ್ದೇನೆ. ಸಾಯಿಸಬೇಕು ಎಂದು ಮಾಡಿಲ್ಲ. ಅಲ್ಲದೇ ಮುಂದೆ ಬೇರೆ ಯಾವುದೇ ಯುವತಿಗೂ ಇಂತಹ ದ್ರೋಹ ಮಾಡಬಾರದು ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ವಿಡಿಯೋದಲ್ಲಿ ವೈದ್ಯೆ ಹಾಗೂ ಸಂತ್ರಸ್ತ ಹಾಸಿಗೆಯ ಮೇಲೆ ರಕ್ತದ ಮಡುವಿನಲ್ಲಿ ನೋವಿನಿಂದ ಅಳುತ್ತಿರುವುದು ಕಂಡುಬಂದಿದೆ.
ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
