ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ತೆರಳಿ ಮರಳಿ ಬರುತ್ತಿದ್ದ ವೇಳೆ ಶಾಸಕ ಮುನಿರತ್ನ ಮೊಟ್ಟೆ ದಾಳಿಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಸಕರ ಆರೋಗ್ಯ ಸ್ಥಿರವಾಗಿದ್ದು, ಇಂದು ಆಸ್ಪತ್ರೆಯಲ್ಲೇ ಇರುವಂತೆ ಶಾಸಕರಿಗೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ತಲೆಗೆ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ 24 ಗಂಟೆ ಅಬ್ಸರ್ವೇಶನ್ ನಲ್ಲಿರಬೇಕು ಎಂದು ವೈದ್ಯರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಜನ್ ನವೀನ್ ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ತಲೆಯ ಹಿಂಭಾಗಕ್ಕೆ ಪೆಟ್ಟು ಬಿದ್ದಿದ್ದರಿಂದ ಇಂದು ಒಂದು ದಿನ ಆಸ್ಪತ್ರೆಯಲ್ಲೇ ಇರುವಂತೆ ವೈದ್ಯರು ಹೇಳಿದ್ದಾರೆ. ಹೀಗಾಗಿ ಶಾಸಕರು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಮುನಿರತ್ನ ಅವರಿಂದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.