ಶಿವಮೊಗ್ಗ: ವಾಹನ ತಪಾಸಣೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ (Police) ಸಿಬ್ಬಂದಿಯೊಬ್ಬರನ್ನು ಕಾರಿನ (Car) ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ನಡೆದಿದೆ.
ಈ ಘಟನೆ ನಗರದಲ್ಲಿ ನಡೆದಿದೆ. ನಗರದ ಸಹ್ಯಾದ್ರಿ ಕಾಲೇಜಿನ ಹತ್ತಿರ ಪೂರ್ವ ಸಂಚಾರ ಠಾಣೆಯ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದರು. ಕಾರನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ.
ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೇ ಕಾರು ಚಲಾಯಿಸಿದ್ದಾರೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ವರ್ತನೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.