ಬೆಂಗಳೂರು : ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಮೀಪ ಕಾರು ಅಪಘಾತ ಸಂಭವಿಸಿದೆ. ಮಾರುತಿ ಇಕೋ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕ ನಿದ್ರೆ ಮಂಪರಿನಲ್ಲಿ ಚಾಲನೆ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಡಿವೈಡರ್‌ನ ಕಬ್ಬಿಣದ ಸರಳುಗಳಿಗೆ ಕಾರು ಸಿಲುಕಿಕೊಂಡಿತ್ತು. ಘಟನೆಯ ನಂತರ ಕಾರನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ ನಡೆಸಬೇಕಾಯಿತು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇದನ್ನೂ ಓದಿ : ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!



















