ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೊರಟಗೆರೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಗಳ ಸ್ಥಿತಿ ಗಂಭೀರವಾಗಿದೆ.
ದಯಾನಂದ (46) ಸಾವನ್ನಪ್ಪಿರುವ ವ್ಯಕ್ತಿ. ಮೂಲತಃ ಚಿಕ್ಕಮಗಳೂರಿನವರಾದ ಇವರು, ಬೇಲೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ ಬೇಲೂರಿನಲ್ಲಿ ವಾಸಿಸುತ್ತಿದ್ದರು. ಆದರೆ, ಚಿಕ್ಕಮಗಳೂರಿಗೆ ದಯಾನಂದ ಭಾನುವಾರ ತೆರಳಿದ್ದರು. ಮಗಳೊಂದಿಗೆ ಸೋಮವಾರ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಡಿಕೆ ತೋಟದಲ್ಲಿ ಬಿದ್ದಿದೆ.
ದಯಾನಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಎಸ್ಸೆಸ್ಸೆಲ್ಸಿ ಓದುತ್ತಿರುವ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಮಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.