ಹಾವೇರಿ: ಸಾರಿಗೆ ಬಸ್ ಚಾಲಕನೋರ್ವ ಬಸ್ ನಲ್ಲಿಸಿ ಮಾರ್ಗ ಮಧ್ಯದಲ್ಲಿ ನಮಾಜ್ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಹಾವೇರಿ ಮಾರ್ಗ ಮಧ್ಯದಲ್ಲಿ ಕಂಡಕ್ಟರ್ ಕಂ ಡ್ರೈವರ್(Driver) ನಮಾಜ್ (Namaz) ಮಾಡಿರುವ ವಿಡಿಯೋ ವೈರಲ್ ಆಗಿದೆ. ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಬಸ್ನಲ್ಲೇ ನಮಾಜ್ ಮಾಡಿದ್ದಾರೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಈ ಘಠನೆ ನಡೆದಿದೆ.
ಇದನ್ನು ಕಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದಾರೆ.