ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ 2 ದಿನಗಳಲ್ಲೇ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ ಆರಂಭಿಸಿದ್ದು, ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ.
ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದ್ದು, ಈ ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ, ಚುನಾವಣಾ ವೇಳಾಪಟ್ಟಿಯನ್ನು ಆದಷ್ಟು ಬೇಗ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.



















