ನವದೆಹಲಿ: ಚುನಾವಣಾ ಆಯೋಗ ಬಿಜೆಪಿಗೆ ಶರಣಾಗಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಚುನಾವಣೆ (Delhi Elections) ಸಮೀಪಿಸುತ್ತಿದ್ದಂತೆ ರಾಜಕೀಯ ಕೆಸರೆರಚಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗ ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದು ಯಕ್ಷ ಪ್ರಶ್ನೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ, ರಾಷ್ಟ್ರಪತಿ ಹುದ್ದೆ ನೀಡಬಹುದು. ನಾನು ರಾಜೀವ್ ಕುಮಾರ್ ಅವರನ್ನ ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನ ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆ ಬೇಡ ಎಂದು ಹೇಳಿದ್ದಾರೆ.