ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವಿಚಾರಕ್ಕೆ ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದರು.
ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದು ನಾಡಿನ ಜನತೆಗೆ ಗೊತ್ತಿದೆ. ಉಡುಪಿಯಲ್ಲಿ ಶಾಂತಿ ಕದಡುವ ಪ್ರಯತ್ನ ಅವರಿಂದ ನಡೆಯಬಾರದು. ಅವರು ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪನ್ನು ಬಿಳಿ ಮಾಡುವುದರಲ್ಲಿ ಮತ್ತು ಬಿಳಿಯನ್ನು ಕಪ್ಪು ಮಾಡುವುದರಲ್ಲಿ ಪರಿಣಿತರು.
ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲ ತರನಾದ ಸ್ವಾತಂತ್ರ್ಯ ಕಾಂಗ್ರೆಸ್ ಕೊಟ್ಟಿದೆ. ತಮ್ಮ ಸರ್ಕಾರ ಯಾರ ವಾಕ್ ಸ್ವಾತಂತ್ರ್ಯಕ್ಕೂ ಅಡ್ಡಿ ಬರಲ್ಲ. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.