ಪ್ರಯಾಗ್ ರಾಜ್: ಬಾಲಿವುಡ್ ಹಾಗೂ ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಟಿಸಿದ್ದ ನಟಿ ಈಗ ಸನ್ಯಾಸಿನಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ನಟಿ ಮಮತಾ ಕುಲಕರ್ಣಿ (Mamata Kulkarni) ಲೌಕಿಕ ಜಗತ್ತಿನಿಂದ ವಿಮುಖರಾಗಿ ಆಧಾತ್ಮಿಕ ಜಗತ್ತಿಗೆ ಕಾಲಿಟ್ಟಿದ್ದಾರೆ. ಕನ್ನಡ ಸೇರಿದಂತೆ 90ರ ದಶಕದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದ ನಟಿ ಮಮತಾ, ಕಿನ್ನರ ಅಖಾಡಕ್ಕಿಳಿದು ಮಹಾಮಂಡಲೇಶ್ವರಿಯಾಗಿದ್ದಾರೆ. ಈಗ ಮಮತಾ ಕುಲಕರ್ಣಿ ತಮ್ಮ ಹೆಸರನ್ನು ಕೂಡ ಬದಲಾಯಿಸಿಕೊಂಡಿದ್ದಾರೆ. `ಮಾಯಿ ಮಮತಾ ನಂದಗಿರಿ’ ಎಂದು ನಾಮಕರಣ ಮಾಡಿಕೊಂಡಿದ್ದಾರೆ.
ಮಹಾಕುಂಭಮೇಳದಲ್ಲಿ ಬಾಗಿಯಾಗಿರುವ ನಟಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ನಂತರ ತಮ್ಮ ಸ್ವಂತ ಪಿಂಡ ಪ್ರದಾನಮಾಡುವ ಮೂಲಕ ಜೂನಾ ಅಖಾಡದ ಅಡಿ ಕಾರ್ಯನಿರ್ವಹಿಸುವ ಕಿನ್ನರ ಅಖಾಡಕ್ಕೆ ಸೇರಿಕೊಂಡಿದ್ದಾರೆ. ಈ ಮೂಲಕ ಮಹಾಮಂಡಲೇಶ್ವರರಾಗಿದ್ದಾರೆ. ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮಿ ನಾರಾಯಣ ತ್ರಿಪಾಠಿ ದೀಕ್ಷೆ ನೀಡಿದ್ದಾರೆ. ಈ ನಟಿ ಕನ್ನಡದ ವಿಷ್ಣು ವಿಜಯ ಸಿನಿಮಾದಲ್ಲಿ ನಟಿಸಿದ್ದಾರೆ.