ಪುಷ್ಪ 2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಭಾರೀ ಮೆಚ್ಚುಗೆ ಗಳಿಸುತ್ತಿದೆ. ಈ ಮಧ್ಯೆ ಚಿತ್ರದ ಮೊದಲ ಭಾಗವನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ‘ಪುಷ್ಪ’ ಚಿತ್ರ ತಂಡ ಮುಂದಾಗಿದೆ.
2021ರಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಆ ಚಿತ್ರ ಭಾರೀ ಹೆಸರು ಮಾಡಿತ್ತು. ಆನಂತರ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿತ್ತು. ನಂತರ ಒಟಿಟಿ ಮತ್ತು ಟಿವಿಯಲ್ಲಿ ಪ್ರಸಾರ ಆಗಿತ್ತು. ಜನರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದರು. ಹೀಗಾಗಿ ಪುಷ್ಪ 2 ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇದಕ್ಕೂ ಮುನ್ನ ಪುಷ್ಪ ಚಿತ್ರವನ್ನು ರೀ-ರಿಲೀಸ್ ಮಾಡಲು ನಿರ್ಧರಿಸಲಾಗಿದೆ.
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಪುಷ್ಪ’ ಸಿನಿಮಾದ ಸೀಕ್ವೆಲ್ ಆಗಿ ‘ಪುಷ್ಪ 2’ ಸಿನಿಮಾ ಸಿದ್ಧವಾಗಿದೆ. ಪುಷ್ಪ 2 ಡಿಸೆಂಬರ್ 5ರಂದು ಬಿಡುಗಡೆ ಆಗಲಿದೆ. ಈ ಕಥೆ ಮತ್ತೊಮ್ಮೆ ನೆನಪಿಸಬೇಕು ಎಂಬ ಕಾರಣಕ್ಕೆ ‘ಪುಷ್ಪ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲಾಗುತ್ತಿದೆ ಎನ್ನಲಾಗಿದೆ. ‘ಪುಷ್ಪ 2’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.