ಮಂಡ್ಯ : ಜಿಲ್ಲೆಯಲ್ಲಿ ಮಹಿಳೆಯೋರ್ವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಮಹಿಳೆ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಕರಿಯಪ್ಪ ಎಂಬುವವರ ಪತ್ನಿ ಶೀಲಾ(45) ಹೃದಯಾಘಾತಕ್ಕೆ ಬಲಿಯಾದವರು. ಶೀಲಾ ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿತಾದರೂ ಕೊನೆಯುಸಿರೆಳೆದಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.