ತಾಯಿಯೊಬ್ಬರು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಪ್ರಸಿದ್ಧ ಪ್ರವಾಸಿತಾಣವಾದ ಭೇದಘಾಟ್ ಗೆ ಕರೆದೊಯ್ಯಲು ತಾಯಿ ನಿರಾಕರಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಭೇದಘಾಟ್ ಗೆ ಕರೆದುಕೊಂಡು ಹೋಗುವಂತೆ ಕೇಳಿದ್ದಾಳೆ. ಇದಕ್ಕೆ ತಾಯಿ ನಿರಾಕರಿಸಿದ್ದಕ್ಕೆ ಮೆಟ್ಟಿಲು ಹತ್ತಿ ಡೋರ್ ಕರ್ಟನ್ ಗೆ ನೇಣು ಬಿಗಿದುಕೊಂಡಿದ್ದಾಳೆ ಎಂದು ದನ್ವಂತ್ರಿ ನಗರ ಠಾಣೆಯ ಇನ್ಸ್ ಪೆಕ್ಟರ್ ವಿನೋದ್ ಪಾಠಕ್ ಹೇಳಿದ್ದಾರೆ.