ರಾಜ್ಯದಲ್ಲಿ ವಕ್ಫ್ ಗೊಂದಲ ಜೋರಾಗಿದ್ದು, ಇದು ಸರ್ಕಾರಕ್ಕೆ ಸಂಕಷ್ಟ ತರುತ್ತಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಈಗ ಈ ವಿವಾದಕ್ಕೆ ಸಂಪೂರ್ಣವಾಗಿ ತೆರೆ ಎಳೆದಿದೆ.
ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ಕೂಡಲೇ ಮರಳಿ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಸೂಚನೆ ನೀಡಿದ್ದಾರೆ. ಅಲ್ಲದೇ, ಅಧಿಕೃತ ಆದೇಶ ಹೊರಡಿಸಿದ್ದಾರೆ. ರೈತರ ಪಹಣಿ ಕುರಿತಂತೆ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ಮರಳಿ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಹೇಳಿದ್ದಾರೆ.
ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಹಿಂದೆ ಸೂಚನೆ ನೀಡಿದ್ದ ಸಿಎಂ ಈಗ ಅಧಿಕೃತ ಆದೇಶ ಹೊರಡಿಸಿದ್ದಾರೆ.