ಬೆಂಗಳೂರು: ರಾಮನಗರ ಜಿಲ್ಲೆ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ಜನರು ಬೆಚ್ಚಿ ಬಿದ್ದಿದ್ದರು. ಸದ್ಯ ಸರ್ಕಾರವು ಈ ಸಂಘರ್ಷಕ್ಕೆ ಅಂತ್ಯ ಹಾಡಲು ಮುಂದಾಗಿದೆ.
ಕಾಡಾನೆ ಹಾವಳಿಯಿಂದ ಬೆಳೆ ಹಾಗೂ ಪ್ರಾಣ ಹಾನಿಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು 60 ಕೋಟಿ ರೂ. ಅನುದಾನವನ್ನು ಈ ಹಿಂದೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಆದರೆ, ಅರಣ್ಯ ಸಚಿವರೊಂದಿಗೆ 15 ದಿನಗಳ ಹಿಂದೆ ಮಾಜಿ ಸಂಸದ ಡಿ.ಕೆ. ಸುರೇಶ್ ಸಭೆ ನಡೆಸಿದ್ದು, ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದ್ದರು.
ಹೆಚ್ಚುವರಿಯಾಗಿ 300 ಕೋಟಿ ಅನುದಾನ ಬಿಡುಗಡೆಗೆ ಬೇಡಿಕೆ ಇಡಲಾಗಿತ್ತು. ಅದರ ಭಾಗವಾಗಿ ಕನಕಪುರ ವಿಧಾನಸಭಾ ಕ್ಷೇತ್ರದ 8.50 ಕಿ.ಮೀ.ಗೆ 12.37 ಕೋಟಿ, ರಾಮನಗರ ವಿಧಾನಸಭಾ ಕ್ಷೇತ್ರದ 15 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ 21.84 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಿಂದ ರೈತರ ಜೀವಹಾನಿ ಹಾಗೂ ಬೆಳೆಹಾನಿ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ರೈತರು ಸಂತಸ ಪಡುವಂತಾಗಿದೆ.