ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರೊಬ್ಬರು ಬಾಲಕನಿಗೆ ಥಳಿಸಿರುವ ಘಟನೆ ನಡೆದಿದೆ.
ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ತ್ವೈಬಾ ಗಾರ್ಡನ್ ಮುಖ್ಯಸ್ಥ ಅದಿ ಕಿಲ್ಲೂರು ಎಂಬ ವ್ಯಕ್ತಿ ಬಾಲಕನ ಮೇಲೆ ಮನ ಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬಾಲಕನ ಮೈಮೇಲೆ ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಬಾಲಕನ ಸ್ಥಿತಿ ಕಂಡು ಪೋಷಕರು ಕಣ್ಣೀರು ಸುರಿಸಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಛೀಮಾರಿ ಹಾಕುತ್ತಿದ್ದಾರೆ.
ಪಾಲಕರು ಮಗನ ಸ್ಥಿತಿ ಕಂಡು ಮಾನಸಿಕ ಖಿನ್ನತೆಗೆ ಜಾರಿದ್ದು, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.