ಬೆಂಗಳೂರು: ಮುಡಾ ಹಗರಣ (Muda Scam)ಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.
ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆ ಉಲ್ಲೇಖಿಸಿದ್ದು, ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚಿಸಿದರು.
ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ.