ಲಖನೌ | ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.

ಮಾಹಿತಿಗಳ ಪ್ರಕಾರ, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು. ಮೌರ್ಯ, ಅವರ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಐದು ಜನರಿಂದ ಹೆಲಿಕಾಪ್ಟರ್ ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗಿತ್ತು.
ಆದ್ರೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಗಾಳಿಯಲ್ಲಿರುವಾಗಲೇ ಇದ್ದಕ್ಕಿದ್ದಂತೆ ಕೆಬಿನ್‌ನೊಳಗೆ ದಟ್ಟವಾದ ಹೊಗೆ ಆವರಿಸಿತು. ಅಷ್ಟೇ ಅಲ್ಲದೆ, ಕಾಕ್‌ಪಿಟ್‌ನಲ್ಲಿದ್ದ ಡಿಜಿಟಲ್ ಡಿಸ್‌ಪ್ಲೇ ಸಿಸ್ಟಮ್ ಕೂಡ ಸಂಪೂರ್ಣವಾಗಿ ಸ್ಥಗಿತಗೊಂಡಿತು ಎನ್ನಲಾಗಿದೆ.
ಈ ವೇಳೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್ ತಕ್ಷಣವೇ ಲಖನೌ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅನ್ನು ಸಂಪರ್ಕಿಸಿ ತುರ್ತು ಪರಿಸ್ಥಿತಿಯ ಮಾಹಿತಿ ನೀಡಿದ್ದಾರೆ. ಎಟಿಸಿಯಿಂದ ತಕ್ಷಣದ ಅನುಮತಿ ಪಡೆದ ಪೈಲಟ್, ಹೆಲಿಕಾಪ್ಟರ್ ಅನ್ನು ಲಖನೌನ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ಲ್ಯಾಂಡಿಂಗ್ ಆದ ತಕ್ಷಣ ಎಲ್ಲರನ್ನೂ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಯಿತು. ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಇದನ್ನೂ ಓದಿ : ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!



















