ಬೆಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಆನಂತರ ತಾನೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ನೆಲಮಂಗಲದ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಹಾರೋಕ್ಯಾತನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಿದ್ದಲಿಂಗಯ್ಯ ಸ್ವಾಮಿ(38) ಎಂಬಾತನಿಂದ ಈ ಕೃತ್ಯ ನಡೆದಿದೆ. ಆರೋಪಿ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದ.
ಆದರೆ, ಇತ್ತೀಚೆಗೆ ಅಕ್ರಮ ಸಂಬಂಧದ ವಿಷಯವಾಗಿ ಪತಿ ಹಾಗೂ ಪತ್ನಿಯ ಮಧ್ಯೆ ಜಗಳವಾಗಿದೆ. ಈ ವೇಳೆ ಬಾಯಿಗೆ ಫೆವಿಕ್ವಿಕ್ ಹಾಕಿ ಕತ್ತು ಹಿಸುಕಿದ್ದಾನೆ. ಆಗ ಹೆಂಡತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆದರೆ, ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಪತ್ನಿ ಬದುಕಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ ಪತಿಯ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣಎ ನಡೆಸುತ್ತಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.