ಮಂಗಳೂರು: ಜಿಲ್ಲೆಯ ಕುಡುಪು ಬಳಿ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಕೇರಳದ ವಯಾನಾಡಿನ ಮನವಂತವಾಡಿಯ ಪುಲ್ಪಲ್ಲಿ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಅಶ್ರಫ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ನಗರದ ಕುಡುಪು ಬಳಿ ಕ್ರಿಕೆಟ್ ಮ್ಯಾಚ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿತ್ತು. ಸ್ಥಳಕ್ಕೆ ಅಶ್ರಫ್ ಕೂಡ ಆಗಮಿಸಿದ್ದ. ಈ ವೇಳೆ ಕ್ರಿಕೆಟ್ ನಡೆಯುತ್ತಿದ್ದ ಸ್ಥಳದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನಂತೆ. ಆಗ ಕ್ರಿಕೆಟ್ ಆಡುತ್ತಿದ್ದ ಯುವಕರಿಂದ ಮಹಮ್ಮದ್ ಅಶ್ರಫ್ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಈ ವೇಳೆ ದೇಹದ ಸೂಕ್ಷ್ಮ ಭಾಗಗಳಿಗೆ ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹೀಗಾಗಿ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಘಟನೆ ಭಾನುವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 20 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.