ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸುತ್ತ ಅವರ ಗ್ಯಾಂಗ್ ಸುತ್ತಿಕೊಂಡಿದೆ. ಆ ಗ್ಯಾಂಗ್ ಈಗ ಮದ್ದೂರಿನಲ್ಲೂ ಬಾಲ ಬಿಚ್ಚಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ? ಎಂಬ ಅನುಮಾನ ಬರುವಂತೆ ಈ ಸರ್ಕಾರ ನಡೆದುಕೊಳ್ಳುತ್ತಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು. ಈಗ ಮದ್ದೂರಿನಲ್ಲಿ ಈ ಗ್ಯಾಂಗ್ ಬಾಲ ಬಿಚ್ಚಿದೆ.
ಇಂತಹ ಘಟನೆಗಳ ಹಿಂದೆ ಇರುವವರಿಗೆ ಸರ್ಕಾರದ ಕುಮ್ಮಕ್ಕು ಇದೆ. ಸಾರ್ವಜನಿಕ ಆಸ್ತಿ ಇವರ ಅಪ್ಪಂದಾ? ಸಾರ್ವಜನಿಕ ರಸ್ತೆಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ.