ಬೆಂಗಳೂರು: ಕಾಡನೆವೊಂದು ರಸ್ತೆಯಲ್ಲಿ ಬರುತ್ತಿರುವ ಕಾರಿಗೆ ಏಕಾಏಕಿ ಅಡ್ಡ ಬಂದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇತ್ತಿಚೆಗೆ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರ ಜಮೀನುಗಳಿಗೆ ಬಂದು ಬೆಳೆ ನಾಶ ಮಾಡುತ್ತಿವೆ. ಇದರಿಂದ ಬೇಸತ್ತ ರೈತರು, ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.



















