ಬೆಂಗಳೂರು: ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿರುವ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು ಸೇರಿ 45 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್, ಜಮಖಂಡಿ
ಹುದ್ದೆಗಳ ಸಂಖ್ಯೆ: 45
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 27
ಉದ್ಯೋಗ ಸ್ಥಳ: ಜಮಖಂಡಿ, ಬಾಗಲಕೋಟೆ
ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿ.ಇ, ಕಂಪ್ಯೂಟರ್ ಸೈನ್ಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಅನುಗುಣವಾಗಿಯೇ ನೇಮಕಾತಿ ಹೊಂದಿದವರಿಗೆ ಮಾಸಿಕ 62,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
- ಕಿರಿಯ ಸಹಾಯಕರು : 14
- ಗಣಕಯಂತ್ರ ನಿರ್ವಾಹಕರು : 04
- ಸಿಪಾಯಿ : 16
- ರಾತ್ರಿ ಕಾವಲುಗಾರರು : 08
- ವಾಹನ ಚಾಲಕರು : 02
- ಗನ್ ಮ್ಯಾನ್ : 01
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35-45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. https://thejamkhandiurbanbank.com/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.