ಬೆಂಗಳೂರು: ಕರವೇ ಹಾಗೂ ಕೆಪಿಎಸ್ಸಿ ಅಭ್ಯರ್ಥಿಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೆಪಿಎಸ್ಸಿ ಮರು ಪರೀಕ್ಷೆಯಲ್ಲಿ 70ಕ್ಕೂ ಅಧಿಕ ಪ್ರಶ್ನೆಗಳಲ್ಲಿ ಲೋಪಗಳಿದ್ದು, ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಸರ್ಕಾರ ಮರು ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಕರವೇ ನೇತೃತ್ವದಲ್ಲಿ ಕೆಪಿಎಸ್ಸಿ ಅಭ್ಯರ್ಥಿಗಳು ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ಈ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.