ಚೆನ್ನೈ ಸೂಪರ್ ಕಿಂಗ್ಸ್ (PBKS vs CSK) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ತಂಡದ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ (Priyansh Arya) ಕೇವಲ 39 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
ಐಪಿಎಲ್ನಲ್ಲಿ ಪ್ರಿಯಾಂಶ್ ಅವರ ಚೊಚ್ಚಲ ಐಪಿಎಲ್ (IPL 2025) ಶತಕವಾಗಿದ್ದರೆ, 2025 ರ ಐಪಿಎಲ್ನಲ್ಲಿ ದಾಖಲಾದ ಅತಿ ವೇಗದ ಶತಕ ಎಂಬ ದಾಖಲೆಗೆ ಸಾಕ್ಷಿಯಾಗಿದೆ. ಐಪಿಎಲ್ ಇತಿಹಾಸದಲ್ಲಿ ದಾಖಲಾದ ನಾಲ್ಕನೇ ವೇಗದ ಶತಕ ಎಂಬ ದಾಖಲೆ ಕೂಡ ಇದಾಗಿದೆ.
ಇದೇ ಮೊದಲ ಬಾರಿಗೆ ಐಪಿಎಲ್ ಅಂಗಳ ಪ್ರವೇಶಿಸಿರುವ 24 ವರ್ಷದ ಪ್ರಿಯಾಂಶ್, ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ್ದಾರೆ. ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಆತ್ಮವಿಶ್ವಾಸದ ಆಟ ಮುಂದುವರೆಸಿದರು. ನಂತರ 13 ನೇ ಓವರ್ ನಲ್ಲಿ ಸತತ 3 ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸುವ ಮೂಲಕ ತಮ್ಮ ಮೊದಲ ಶತಕ ಪೂರ್ಣಗೊಳಿಸಿದರು. ಈ ಮೂಲಕ ಈ ಸೀಸನ್ ನ ಅತಿ ವೇಗದ ಶತಕ ಬಾರಿಸಿದರು. ಅಲ್ಲದೇ, ಈ ಸೀಸನ್ ನಲ್ಲಿ ಎರಡನೇ ಶತಕ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ದ ಪ್ರಿಯಾಂಶ್ ಆ ಪಂದ್ಯದಲ್ಲಿ 47 ರನ್ ಗಳಿಸಿದ್ದರು. ಹಿಂದಿನ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟ್ ಆಗಿದ್ದರು. ಪ್ರಿಯಾಂಶ್ ಆರನೇ ಓವರ್ನಲ್ಲಿ ಅಶ್ವಿನ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಆವೃತ್ತಿಯಲ್ಲಿ ಭಾರತೀಯ ಆಟಗಾರನೊಬ್ಬ ಗಳಿಸಿದ ಅತ್ಯಂತ ವೇಗದ ಅರ್ಧಶತಕವಾಗಿದೆ. 13ನೇ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿ, ಮುಂದಿನ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಮೊದಲ ಐಪಿಎಲ್ ಶತಕವನ್ನು ಪೂರ್ಣಗೊಳಿಸಿದ್ದಾರೆ. ಈ ಯುವ ಆಟಗಾರನ ಆಟಕ್ಕೆ ಇಡೀ ದೇಶ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.