ಮೈಸೂರು | ಇತ್ತೀಚಿಗೆ ಪುಂಡ ಯುವಕರಲ್ಲಿ ಬೈಕ್ ವ್ಹೀಲಿಂಗ್ ಕ್ರೇಜ್ ಹೆಚ್ಚಾಗಿದ್ದು, ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರೂ, ಕಂಬಿ ಹಿಂದೆ ಕೂರಿಸಿದರೂ ಪುಂಡರು ಕ್ಯಾರೇ ಎನ್ನುತ್ತಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಕಡೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವ ವಿಡಿಯೋಗಳು ವೈರಲ್ ಆಗ್ತಿವೆ.
ಇದೀಗ ಮೈಸೂರಿನಲ್ಲೂ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಬುದ್ದಿ ಹೇಳಲು ಹೋದ ಸಾರ್ವಜನಿಕರ ಮೇಲೆಯೇ ಪುಂಡ ಪೋಕರಿಗಳು ದರ್ಪ ತೋರಿಸುತ್ತಿದ್ದಾರೆ. ಹೌದು.. ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಹುಣಸೂರಿನ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕರಿಗೆ ತೊಂದರೆಯಾಗುತ್ತೆ, ರಸ್ತೆಯಲ್ಲಿ ವ್ಹೀಲಿಂಗ್ ಮಾಡಬೇಡಿ ಅಂದಿದ್ದಕ್ಕೆ ವ್ಯಕ್ತಿಯ ಮನೆಗೆ ನುಗ್ಗಿದ 12 ಮಂದಿ ಕಿಡಿಗೇಡಿಗಳು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾ ಹಾಗೂ ಸ್ಥಲೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ | ಹೆಲಿಕಾಪ್ಟರ್ ಮೂಲಕ ಹೈಟೆಕ್ ಸರ್ವೆ.. ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ!



















