ರಾಯಚೂರು: ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಜಲಸಮಾಧಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ರಾಯಚೂರು (Raichuru) ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. ಮಲಿಯಾಬಾದ್ (Maliabad) ಗ್ರಾಮದ ನಿವಾಸಿ ತಾಯಿ ರಾಧಮ್ಮ (32) ಹಾಗೂ ಮಗ ಕೆ.ಸಂಜು (5) ಸಾವನ್ನಪ್ಪಿರುವ ದುರ್ದೈವಿಗಳು. ರಾಧಮ್ಮ ತನ್ನ ಪುತ್ರನನ್ನು ಕರೆದುಕೊಂಡು ಸಂಜು ಬಟ್ಟೆ ತೊಳೆಯಲೆಂದು ಕೆರೆಗೆ ಹೋಗಿದ್ದರು. ಈ ವೇಳೆ ಮಗ ಕಾಲು ಜಾರಿ ಕರೆಯೊಳಗೆ ಬಿದ್ದಿದ್ದಾನೆ. ಕೂಡಲೇ ತಾಯಿ ರಾಧಮ್ಮ ಸಂಜುನನ್ನು ಕಾಪಾಡಲು ಹೋಗಿ ಜಲಸಮಾಧಿಯಾಗಿದ್ದಾಳೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.