ಬೆಂಗಳೂರು: ಪತಿಯ ಮೇಲಿನ ಕೋಪಕ್ಕೆ ತಾಯಿಯೊಬ್ಬಳನ್ನು ಮಕ್ಕಳನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು(7), ಶಿಯಾ ಳನ್ನ (3) ಕೊಲೆ ಮಾಡಿದ್ದಾಳೆ. ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ, ಮಹಿಳೆಯನ್ನು ಪತಿ ಉಳಿಸಿದ್ದಾರೆ.
ಜಾರ್ಖಾಂಡ್ ಮೂಲದ ಸುನಿಲ್ ಸಾಹು ಹಾಗೂ ಮಮತಾ ಸಾಹು ದಂಪತಿ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಸುನಿಲ್ ಸಾಹು ಆಟೋ ಓಡಿಸುತ್ತಿದ್ದರು. ಪತಿ ಜಾರ್ಖಾಂಡ್ ಮೂಲದ ಮಹಿಳೆ ಜೊತೆಗೆ ಫೋನಲ್ಲಿ ಮಾತಾಡ್ತಾನೆ ಎಂಬ ಸಂಶಯ ಇತ್ತು. ಹೀಗಾಗಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಆಗ ಕೋಪದಲ್ಲಿದ್ದ ಮಹಿಳೆ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಈ ಕುರಿತು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.