ಬೆಳಗಾವಿ: ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಸವದತ್ತಿ (Savadatti) ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಸೋಹಿಲ್ ಅಹ್ಮದ್ ಕಿತ್ತೂರು (17) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಯುವಕ ಅದೇ ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ನಡೆಸುತ್ತಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮುರುಗೋಡು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಹತ್ಯೆ ಖಂಡಿಸಿ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.