ರಾಮನಗರ: ರಾಜ್ಯ ಕಾಂಗ್ರೆಸ್‌ನಲ್ಲಿ ಎಷ್ಟು ಬಾರಿ ಸೂಚನೆ ನೀಡಿದರೂ ಮತ್ತೆ ಮತ್ತೆ ಅದೇ ಮಾತುಗಳನ್ನು ನಾಯಕರುಗಳು ಆಡುತ್ತಿದ್ದಾರೆ.
ರಾಜ್ಯ ಸರ್ಕಾರದ ಬಗ್ಗೆ ಯಾರೊಬ್ಬರು ಮಾತನಾಡಬಾರದು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ದನಿ ಎತ್ತರಬಾರದೆಂದು ಹೈಕಮಾಂಡ್ ನಾಯಕರು ಸೂಚನೆ ಕೊಟ್ಟಿದ್ದರೂ ಇಂದು ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ಬಾಲಕೃಷ್ಣ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಹೇಳುವ ಮೂಲಕ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯ ಆಖಾಡದಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್ ಇಂದು ಕಾರ್ಯಕರ್ತರಿಗೆ ಅಭಿನಂದನಾ ಕೃತಜ್ಞತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಗತ ಭಾಷಣದ ಜವಾಬ್ದಾರಿಯನ್ನು ಹೊತ್ತಿದ್ದ ಮಾಗಡಿ ಶಾಸಕ ಬಾಲಕೃಷ್ಣ, ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಬದಲಾವಣೆ ನಿಶ್ಚಿತ ಎಂಬುದನ್ನು ಸಾಬೀತುಪಡಿಸಿದ್ದಾರೆ.