ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ 2026 ಮಹೋತ್ಸವವು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಬೆಳಿಗ್ಗೆ 6 ಗಂಟೆಗೆ ಚಾಮುಂಡಿ ತಪ್ಪಲು ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಯೋಗಾಚರಣೆ ಕಾರ್ಯಕ್ರಮ ನಡೆಯಿತು.
ನಂತರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಪ್ರದರ್ಶನ ಆಯೋಜಿಸಲಾಗಿತ್ತು. ಸಂಜೆ 5.30 ಗಂಟೆಗೆ ಕಂಬಳ ಕೋಣಗಳ ಸ್ಪರ್ಧೆಯಲ್ಲಿ ಗೆದ್ದ ಕೋಣಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ.



















