ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮಿತಿ ಮೀರುತ್ತಿದ್ದು, ಸೋಂಕಿತರ ಸಂಖ್ಯೆ 250ರ ಗಡಿ ದಾಟಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೂ ರಾಜ್ಯದಲ್ಲಿ 253 ಕೊವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು 17 ಜನರಲ್ಲಿ ಕೊವಿಡ್ ದೃಢವಾಗಿದೆ.
ಒಟ್ಟು 250 ಜನರು ಹೋಮ್ ಐಸೋಲೇಷನ್ ನಲ್ಲಿದ್ದಾರೆ. 3 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.