ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದ್ದು, 800ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 41 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 837 ಆಗಿದೆ.
ಇಲ್ಲಿಯವರೆಗೆ ಒಟ್ಟು 444 ಸಕ್ರಿಯ ಕೊವಿಡ್ ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ 41ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 386 ಜನರು ಗುಣಮುಖರಾಗಿದ್ದಾರೆ. 444 ಜನರೂ ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಸದ್ಯ ಶೇ. 7.1ರಷ್ಟಿರುವ ಕೊವಿಡ್ ಪಾಸಿಟಿವ್ ರೇಟ್ ರಾಜ್ಯದಲ್ಲಿದೆ.