ಹುಬ್ಬಳ್ಳಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮೂಡಿಸುತ್ತಿದೆ. ಈಗ ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೂಡ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗಿದೆ.
ಕಳೆದ ಒಂದೇ ತಿಂಗಳಲ್ಲಿ ಹುಬ್ಬಳ್ಳಿ ಕಿಮ್ಸ್ ನಲ್ಲಿ 26 ಜನ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 101 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಸಾವಿನ ಬಗ್ಗೆ ಲೆಕ್ಕ ಸಿಕ್ಕಿಲ್ಲ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗಲಿದ್ದು, ಆತಂಕ ಮೂಡಿಸುತ್ತಿದೆ.
ಜನವರಿಯಲ್ಲಿ 308 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 11 ಜನ ಸಾವನ್ನಪ್ಪಿದ್ದಾರೆ. ಫೆಬ್ರವರಿಯಲ್ಲಿ 259 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 13 ಜನ ಸಾವನ್ನಪ್ಪಿದ್ದಾರೆ. ಮಾರ್ಚ್ ನಲ್ಲಿ 277 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ. ಏಪ್ರಿಲ್ ನಲ್ಲಿ 289 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 16 ಜನ ಸಾವನ್ನಪ್ಪಿದ್ದಾರೆ. ಮೇ ನಲ್ಲಿ 303 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 16 ಜನ ಸಾವನ್ನಪ್ಪಿದ್ದಾರೆ. ಜೂನ್ ನಲ್ಲಿ 316 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 26 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹೃದಯಾಘಾತ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಿಮ್ಸ್ ವೈದ್ಯಕೀಯ ನಿರೀಕ್ಷಕ ಡಾ. ಈಶ್ವರ ಹಸಬಿ ಹೇಳಿದ್ದಾರೆ.



















