ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.
ಫುಡ್ ಅರ್ಡರ್ ಮಾಡಿ ಹೋಟೆಲ್ ಗಲ್ಲಾಪೆಟ್ಟಿಗೆಯಲ್ಲಿದ್ದ ಕಂತೆ-ಕಂತೆ ಹಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಕೆ.ಆರ್. ಮಾರುಕಟ್ಟೆಯಲ್ಲಿ ನಡೆದಿದೆ.
ಆರ್ಡರ್ ಪಡೆದುಕೊಂಡು ಮಾಲೀಕ ಒಳಗೆ ಹೋಗುತ್ತಿದ್ದಂತೆ ಖದೀಮ, ಹಣ ಕದ್ದು ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.