ಬೆಂಗಳೂರು: ಸರ್ಕಾರ ಹಾಗೂ ಗುತ್ತಿಗೆದಾರರ ನಡುವೆ ಜಟಾಪಟಿ ಮುಂದುವರೆದಿದೆ.
ಸಚಿವ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್, ಡಿಕೆ ಶಿವಕುಮಾರ್ ಸೇರಿದಂತೆ ಕೆಲವು ಸಚಿವರ ವಿರುದ್ಧ ಗುತ್ತಿಗೆದಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಿದರೂ ಸಚಿವರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಹೀಗಾಗಿ ಸಚಿವರಿಂದ ಸ್ಪಂದನೆ ಸಿಗದೆ ಗುತ್ತಿಗೆದಾರರು ಅಸಮಾಧಾನಗೊಂಡಿದ್ದಾರೆ. ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸುವಂತೆ ಒತ್ತಾಯಿಸಿದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಗುತ್ತಿಗೆದಾರರ ಸಭೆ ಕರೆಯುವಂತೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಗುತ್ತಿಗೆದಾರರು ನಿರ್ಧರಿಸಿದ್ದಾರೆ ಎನ್ನಲಾಗಿದೆ.