ಬೆಂಗಳೂರು: ನನ್ನ ಸಾಮರ್ಥ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಗೃಹ ಸಚಿವ ಆಗಲು ನಾನು ಸಮರ್ಥನಿಲ್ಲ ಎಂದಿದ್ದಾರೆ. ಆದರೆ, ನಾನು ಮೂರ್ನಾಲ್ಕು ಬಾರಿ ಗೃಹ ಸಚಿವನಾಗಿದ್ದೇನೆ. ಅವರು ಹೇಳಿದ್ದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಸಂತೋಷ ಪಡುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ. ಹೀಗಾಗಿ ಇಂದು ನಾವು ಮೊದಲ ಸಭೆ ನಡೆಸಿದ್ದೇವೆ. ಮೂರ್ನಾಲ್ಕು ಕೇಸ್ ಗಳನ್ನು ತನಿಖೆಗೆ ಕೊಡುವ ಕುರಿತು ನಿರ್ಧಾರ ಮಾಡಿದ್ದೇವೆ. 2 ತಿಂಗಳೊಳಗೆ ವರದಿ ಕೊಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ನಾವು ಕೊಡುತ್ತೇವೆ. ಸುಮಾರು ವರ್ಷಗಳ ಪ್ರಕರಣಗಳು ಬಾಕಿ ಇವೆ. ನಮ್ಮ ಸರ್ಕಾರದ ಪ್ರಕರಣಗಳೂ ಇವೆ. ಎಲ್ಲವನ್ನೂ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪಿಎಸ್ ಐ, ಉಪನ್ಯಾಸಕರ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಶೇ. 40ರಷ್ಟು ಕಮಿಷನ್ ಹಗರಣ, ಅಂಬೇಡ್ಕರ್, ಅರಸು ಅಭಿವೃದ್ಧಿ ನಿಗಮದ ಹಗರಣ, ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಇಲಾಖೆ ಹಗರಣ, ಕೋವಿಡ್ ಹಗರಣ ಸೇರಿದಂತೆ ಹಲವು ಹಗರಣಗಳ ಕುರಿತ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.