ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ಮಾಡುವ ವೇಳೆ ಅಪಘಾತಕ್ಕೀಡಾಗಿದೆ. ಈ ಘಟನೆ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದೆ.
ಅಪಘಾತದ ವೇಳೆ 66 ವರ್ಷದ ಅಜಿತ್ ಪವಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳ ಸಹಾಯದಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ವಿಮಾನದಲ್ಲಿ ಅಜಿತ್ ಪವಾರ್ ಅವರ ಅಂಗರಕ್ಷಕರೂ ಇದ್ದರು ಎನ್ನಲಾಗಿದೆ.
ಘಟನಾ ಸ್ಥಳದ ದೃಶ್ಯಗಳಲ್ಲಿ ವಿಮಾನದ ಅವಶೇಷಗಳು ಪ್ರದೇಶದಾದ್ಯಂತ ಚದುರಿಕೊಂಡಿರುವುದು ಕಂಡುಬಂದಿದ್ದು, ಬೆಂಕಿಯ ಜ್ವಾಲೆಗಳು ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ, ವಿಮಾನಕ್ಕೆ ಸಂಭವಿಸಿರುವ ಹಾನಿಯ ಪ್ರಮಾಣ ಹಾಗೂ ಅಜಿತ್ ಪವಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಶಿವಮೊಗ್ಗ | ಆಕಸ್ಮಿಕವಾಗಿ ಹೊತ್ತಿ ಉರಿದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್ ; 36 ಮಂದಿಗೆ ಗಾಯ



















