ಚಿಕ್ಕಮಗಳೂರು: ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡದಂತೆ ಪೊಲೀಸರು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಪೊಲೀಸರು ತಡೆ ನೀಡಿರುವ ಘಟನೆ ನಡೆದಿದೆ.
ಶಿವಮೊಗ್ಗ ನಂತರ ಚಿಕ್ಕಮಗಳೂರಿನಲ್ಲಿ ಕೂಡ ಪೊಲೀಸರು ತಡೆ ನೀಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಅನುಮತಿ ಪಡೆದು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ. ತಹಸೀಲ್ದಾರ್ ಅನುಮತಿ ಪಡೆದು ಪುಸ್ತಕ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
ಪ್ರಮೋದ್ ಮುತಾಲಿಕ್ ಅವರು ಎನ್.ಆರ್. ಪುರ ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ಪುಸ್ತಕ ಬಿಡುಗಡೆಗೆ ಮಾಡಲು ಮುಂದಾಗಿದ್ದರು. ಈ ಪುಸ್ತಕವನ್ನು ರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಬರೆದಿದ್ದಾರೆ. ಆದರೆ, ಈ ಪುಸ್ತಕ ಬಿಡುಗಡೆಗೆ ಪೊಲೀಸರು ಅಡ್ಡಿ ಪಡಿಸಿದ್ದಾರೆ. ಲವ್ ಜಿಹಾದ್ ಎರಡನೇ ಆವೃತ್ತಿಯ ಪುಸ್ತಕವನ್ನು ಬಿಡುಗಡೆ ಮಾಡಲು ಪ್ರಮೋದ್ ಮುತಾಲಿಕ್ ಮುಂದಾಗಿದ್ದರು. ಪೊಲೀಸರು ಅಡ್ಡಿ ಪಡಿಸುತ್ತಿದ್ದಂತೆ ಮುತಾಲಿಕ್, ಶೃಂಗೇರಿ ಕಡೆ ಪ್ರಯಾಣ ಬೆಳೆಸಿದರು. ಅಲ್ಲದೇ, ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಚಿಕ್ಕಮಗಳೂರಿನಲ್ಲಿ ಮಾರ್ಚ್ 7ರಂದು ನಡೆಸಲಾಗುವುದು ಎಂದು ಮುತಾಲಿಕ್ ಘೋಷಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.