ಕೊಡಗು: ಪೊಲೀಸ್ ಪೇದೆಯೊಬ್ಬ ತನ್ನ ಪ್ರಿಯತಮೆಯ ಪತಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಈ ಘಟನೆ ಸೋಮವಾರಪೇಟೆ (Somwarpet) ತಾಲೂಕಿನ ಶನಿವಾರಸಂತೆ ಎಂಬಲ್ಲಿ ನಡೆದಿದೆ. ಪೊಲೀಸ್ ಪೇದೆ ಕೊಟ್ರೇಶ್ (30) ಕೊಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಟ್ರೇಶ್ ಹಾಗೂ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರೇಶ್ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ.
ಪೊಲೀಸ್ ಪೇದೆ ಕೋಟ್ರೆಶ್ ಪ್ರೇಯಸಿ ಆಯಿಷಾಳ ಪಕ್ಕದ ಮನೆಯಲ್ಲಿ ವಾಸವಾಗಿದ್ದ. ಆಯಿಷಾ ಪೊಲೀಸ್ ಪೇದೆ ಕೊಟ್ರೇಶ್ ನನ್ನು ಮಂಗಳವಾರ ಮಧ್ಯರಾತ್ರಿ ಮನೆಗೆ ಕರೆಯಿಸಿದ್ದಳು. ಅಲ್ಲಿ ಕೊಟ್ರೇಶ್ ಆಕೆಯ ಪತಿಯ ಕೊಲೆಗೆ ಯತ್ನಿಸಿದ್ದಾನೆ. ಈ ವೇಳೆ ಇಫ್ರಾಜ್ ಅವರ ಅಕ್ಕನ ಮಗನಿಂದಾಗಿ ದುರಂತ ತಪ್ಪಿದೆ. ಆಗ ಇವರಿಬ್ಬರ ಸಂಬಂಧ ಬಯಲಾಗಿದೆ. ಆದರೆ, ಪೊಲೀಸರು ಕೊಟ್ರೇಶ್ ವಿರುದ್ಧ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ. ನಂತರ ಪ್ರಾಣಾಪಾಯದಿಂದ ಪಾರಾಗಿದ್ದ ಇಫ್ರಾಜ್ ಕೊಡಗು ಎಸ್ಪಿ ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ಎಸ್ಪಿ ಸೂಚನೆಯ ಮೇರೆಗೆ ಈಗ ದೂರು ದಾಖಲಾಗಿದೆ.