
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾದ ನಂತರ ಮೊದಲ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಫೆಬ್ರುವರಿ ಕೊನೆಯ ವಾರದಲ್ಲಿ 110ನೇ ಮನ್ ಕೀ ಬಾತ್ ನೀಡಿದ್ದರು. ಈಗ 111ನೇ ಎಪಿಸೋಡ್ ನಲ್ಲಿ ಇಂದು ಮಾತನಾಡಿದ್ದಾರೆ. ಈ ವೇಳೆ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಅಭಿಯಾನಕ್ಕೆ ಕರೆ ನೀಡಿದರು. ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣ ಅಪ್ಪಿದ ಜಾರ್ಖಂಡ್ ನ ಸಿಧು, ಕಾನ್ಹು ಅವರನ್ನು ಸ್ಮರಿಸಿದ್ದಾರೆ. ಕೇರಳದಲ್ಲಿ ಬುಡಕಟ್ಟು ಸಮುದಾಯದವರು ತಯಾರಿಸುವ ಛತ್ರಿ, ಆಂಧ್ರದಲ್ಲಿ ಬುಡಕಟ್ಟು ಸಮುದಾಯದವರು ಬೆಳೆಯುವ ಅರಾಕು ಕಾಫಿ, ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್ ನಲ್ಲಿ ವಾರಾಂತ್ಯದಲ್ಲಿ ನಡೆಯುವ ಸಂಸ್ಕೃತ ಸಂವಾದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಮ್ಮನ ಪ್ರೀತಿ ಬಹಳ ಮುಖ್ಯ. ಅಮ್ಮನ ಈ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವ ಪರಿಸರ ದಿನಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ್ದೇವೆ. ಏಕ್ ಪೇಡ್, ಮಾ ಕೆ ನಾಮ್ (ಅಮ್ಮನ ಹೆಸರಲ್ಲಿ ಒಂದು ಮರ) ಕೆಂಪೇನ್ ಇದು ಎಂದು ಮೋದಿ ಹೇಳಿದರು. #Plant4Mother ಹ್ಯಾಷ್ ಟ್ಯಾಗ್ ಉಪಯೋಗಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆ ಕೂಡ ಅವರು ಕರೆ ನೀಡಿದ್ದಾರೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಒಳ್ಳೆಯ ಫ್ಲೇವರ್ ಮತ್ತು ಅರೋಮಾಗೆ ಖ್ಯಾತವಾಗಿದೆ ನಾನು ವಿಜಯವಾಡಗೆ ಹೋದಾಗ ಈ ಕಾಫಿಯ ಸ್ವಾದ ಸವಿದಿದ್ದೆ. ಬಹಳ ಅದ್ಭುತವಾಗಿದೆ ಎಂದು ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಸ್ಮರಿಸಿದ್ದಾರೆ.
ಆಲ್ ಇಂಡಿಯಾ ರೇಡಿಯೋದಲ್ಲಿ ಸಂಸ್ಕೃತ ವಾರ್ತೆ ಶುರುವಾಗಿ 50 ವರ್ಷ ಆಗಿರುವುದನ್ನು ಸ್ಮರಿಸಿದ ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ನಡೆಯುವ ಸಂಸ್ಕೃತ ವೀಕೆಂಡ್ ಕಾರ್ಯಕ್ರಮದ ಕುರಿತು ವರ್ಣನೆ ಮಾಡಿದ್ದಾರೆ.
