ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಮಹಾತ್ಮಾ ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ 10 ವರ್ಷಗಳು ಕಳೆದಿವೆ. ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ವೇಳೆ ಮಾತನಾಡಿರುವ ಪ್ರಧಾನಿ ಮೋದಿ, ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವಂತೆ ಕೇಳಿಕೊಳ್ಳುತ್ತೇನೆ. ಈ ಕ್ರಮವು ಸ್ವಚ್ಛ ಭಾರತದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿದ್ದಾರೆ.