ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಜೂನ್ 18ರಂದು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ (Varanasi) ಭೇಟಿ ನೀಡಲಿದ್ದಾರೆ.
ಕಿಸಾನ್ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ, ಸಮ್ಮಾನ್ ನಿಧಿ ಕಂತು ಬಿಡುಗಡೆ ಮಾಡಲಿದ್ದಾರೆ. ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಅವರ ಸಂಸದೀಯ ಕ್ಷೇತ್ರಕ್ಕೆ ಮೊದಲ ಭೇಟಿಯಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಯಾಣದ ಯೋಜನೆಯು ಅವರ ಸಂಸದೀಯ ಕ್ಷೇತ್ರವಾದ ವಾರಾಣಸಿಗೆ ನಾಲ್ಕೈದು ಗಂಟೆಗಳ ಭೇಟಿಯಾಗಿರಲಿದೆ. ದಾರಿಯುದ್ದಕ್ಕೂ ವಿವಿಧ ಸ್ಥಳಗಳಲ್ಲಿ ಅದ್ದೂರಿ ಸ್ವಾಗತವನ್ನು ಸ್ವೀಕರಿಸುವ ನಿರೀಕ್ಷೆಯಿದೆ.
ಭೇಟಿಯ ಮೊದಲ ದಿನವೇ ವಾರಾಣಸಿಯ ರೈತರಿಗೆ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡುವ ಮೂಲಕ ಗೌರವಿಸುತ್ತಾರೆ. ಸಮ್ಮೇಳನ ಮುಗಿದ ನಂತರ ಬಾಬಾ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದಶಾಶ್ವಮೇಧ ಘಾಟ್‌ನಲ್ಲಿ ಪ್ರಸಿದ್ಧ ಗಂಗಾ ಆರತಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.
ವಾರಾಣಸಿಯಿಂದ ಮೂರನೇ ಬಾರಿಗೆ ಪ್ರಧಾನಿ ಮೋದಿ ಆಯ್ಕೆಯಾಗಿದ್ದಾರೆ.