ಶಿವಮೊಗ್ಗ: ತೆಪ್ಪ ಮಗುಚಿದ ಪರಿಣಾಮ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಯುವಕರು ನಾಪತ್ತೆಯಾಗಿದದಾರೆ. ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್ ಹಾಗೂ ಯಶ್ವಂತ್ ಈಜಿಕೊಂಡು ದಡ ಸೇರಿದ್ದಾರೆ. ಆದರೆ, ಮೂವರು ನಾಪತ್ತೆಯಾಗಿದ್ದಾರೆ.
ಮೂವರು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ನಡೆಸಿದ್ದಾರೆ.