ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಬೆಳಗ್ಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ನಂತರ ಸ್ವಾಮಿಯ ಮಹಾ ರಥೋತ್ಸವ ನಡೆಯಿತು. ಈ ವೇಳೆ ಭಕ್ತರು ಉಘೇ ಉಘೇ ಮಾದಪ್ಪ ಎಂದು ಮಾದಪ್ಪನನ್ನು ಸ್ಮರಿಸಿದರು.
ಶಿವರಾತ್ರಿ ಜಾತ್ರಾ ಮಹಾ ರಥೋತ್ಸವ ಪ್ರಯುಕ್ತ ಮಾಯ್ಕಾರ ಮಾದಪ್ಪನಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು, ನಂತರ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಒಳಾಂಗಣದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ರಥೋತ್ಸವಕ್ಕೆ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿ, ಶಾಸಕ ಮಂಜುನಾಥ್ ಚಾಲನೆ ನೀಡಿದರು.